big shocking for ksrtc transport unions
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಬಿಗ್ ಶಾಕ್ ನೀಡಿದೆ.
ನಾಳೆಯಿಂದ ಐದು ದಿನಗಳ ಕಾಲ ಸಾರಿಗೆ ನೌಕರರಿಗೆ ರಜೆ ರದ್ದು ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.
ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ. ಹೀಗಾಗಿ ಜನರಿಗೆ ಸಮರ್ಪಕ ಸೇವೆ ಒದಗಿಸುವುದು ನಿಗಮದ ಕರ್ತವ್ಯ. ನಾಳೆಯಿಂದ ಅಕ್ಟೋಬರ್.19ರವರೆಗೆ ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಸಾರಿಗೆ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಬಾರದು. ಅನಿವಾರ್ಯ ಸಂದರ್ಭ ಹೊತರುಪಡಿಸಿ ಯಾರಿಗೂ ರಜೆ ಇರುವುದಿಲ್ಲ. ನೋ ವರ್ಕ್, ನೋ ಪೇ ನಿಯಮ ಜಾರಿಗೊಳಿಸಿ ಖಡಕ್ ಆದೇಶ ಹೊರಡಿಸಿದೆ.
ಇನ್ನು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಲ್ಕು ನಿಗಮಗಳ ಸಾರಿಗೆ ನೌಕರರು ನಾಳೆಯಿಂದ ಐದು ದಿನಗಳ ಕಾಲ ಮೊದಲ ಹಂತದ ಹೋರಾಟದ ನಿಟ್ಟಿನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ನಡುವೆ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ರಜೆ ರದ್ದು ಮಾಡಿ ಆದೇಶ ಹೊರಡಿಸಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…