Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಆರ್‌ಎಸ್‌ಎಸ್‌ಗೆ 100 ವರ್ಷ ತುಂಬಿದ ಬೆನ್ನಲ್ಲೇ ಬಿಗ್‌ ಶಾಕ್:‌ ಏನದು ಗೊತ್ತಾ?

ಬೆಂಗಳೂರು: ಆರ್‌ಎಸ್‌ಎಸ್‌ ನೂರು ವರ್ಷ ತುಂಬಿದ ಬೆನ್ನಲ್ಲೇ ಶಾಕ್‌ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಬ್ರೇಕ್‌ ಹಾಕಲು ಮುಂದಾಗಿದೆ ಎನ್ನಲಾಗಿದೆ.

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದ್ದು, ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಬ್ರೇಕ್‌ ಹಾಕಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಕೆಲವು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಿದ್ದು, ಶಾಲಾ-ಕಾಲೇಜುಗಳ ಆವರಣ, ಉದ್ಯಾನವನ, ಸರ್ಕಾರಿ ಮೈದಾನ, ಹಾಸ್ಟೆಲ್‌ ಕ್ಯಾಂಪಸ್‌ಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಆರ್‌ಎಸ್‌ಎಸ್‌ ಚಟುವಟಿಕೆಗೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸಿದ್ದು, ಕಾನೂನಾತ್ಮಕವಾಗಿ ಆರ್‌ಎಸ್‌ಎಸ್‌ ನಿಷೇಧಿಸಲು ಸಾಧ್ಯವಿಲ್ಲ ಎಂದು ಅರಿತಿದೆ.

ಹೀಗಾಗಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

Tags:
error: Content is protected !!