ಬೆಂಗಳೂರು: ಆರ್‌ಎಸ್‌ಎಸ್ ನೂರು ವರ್ಷ ತುಂಬಿದ ಬೆನ್ನಲ್ಲೇ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ ಎನ್ನಲಾಗಿದೆ.
ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದ್ದು, ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ಬ್ರೇಕ್ ಹಾಕಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಕೆಲವು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಿದ್ದು, ಶಾಲಾ-ಕಾಲೇಜುಗಳ ಆವರಣ, ಉದ್ಯಾನವನ, ಸರ್ಕಾರಿ ಮೈದಾನ, ಹಾಸ್ಟೆಲ್ ಕ್ಯಾಂಪಸ್‌ಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ಆರ್‌ಎಸ್‌ಎಸ್ ಚಟುವಟಿಕೆಗೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸಿದ್ದು, ಕಾನೂನಾತ್ಮಕವಾಗಿ ಆರ್‌ಎಸ್‌ಎಸ್ ನಿಷೇಧಿಸಲು ಸಾಧ್ಯವಿಲ್ಲ ಎಂದು ಅರಿತಿದೆ.
ಹೀಗಾಗಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…