ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ಮೈಸೂರು ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ತನಿಖೆ ನಡೆಸಿ ಮೂರು ತಿಂಗಳ ಒಳಗಾಗಿ ವಿಚಾರಣಾ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ನ್ಯಾಯಾಧೀಶರು ನಿರ್ದೇಶನ ಮಾಡಿದ್ದಾರೆ.
ಮೈಸೂರಿನ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿಂದು ಉಕ್ತಲೇಖನದ ಮೂಲಕ ಆದೇಶಿಸಿದ್ದಾರೆ.
ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಇನ್ನೊಂದೆಡೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಈ ಎಲ್ಲಾ ಬೆಳವಣಿಗೆ ಮಧ್ಯೆ ಸಿಎಂ ಮುಂದಿನ ನಡೆ ಏನು ಎಂಬುದೇ ಎಲ್ಲರ ಯಕ್ಷ ಪ್ರಶ್ನೆಯಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…