big shocking for ksrtc transport unions
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಆಗಸ್ಟ್.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕಾರ್ಮಿಕ ಇಲಾಖೆ ಬಿಗ್ ಶಾಕ್ ನೀಡಿದೆ.
ಪ್ರತಿಭಟನೆ ನಿಷೇಧಿಸಿ ಕಾರ್ಮಿಕ ಇಲಾಕೆ ಎಸ್ಮಾ ಜಾರಿ ಮಾಡಿದ್ದು, ಮುಷ್ಕರ ನಡೆಸದಂತೆ ನೌಕರರಿಗೆ ತಾಕೀತು ಮಾಡಲಾಗಿದೆ. ಆಗಸ್ಟ್.5ರಂದು ಬಸ್‌ಗಳನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಂಘಟನೆಗಳು ಮುಂದಾಗಿದ್ದವು. ಜನಸಾಮಾನ್ಯರಿಗೆ ಸಾರಿಗೆ ಸೇವೆ ಒದಗಿಸುವುದು ಅಗತ್ಯ ಸೇವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013ರ ಅಡಿ ಎಸ್ಮಾ ಜಾರಿ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಜುಲೈ.1ರಿಂದ ಡಿಸೆಂಬರ್.31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಕೆಎಸ್‌ಆರ್‌ಟಿಸಿ ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಅಧಿಸೂಚನೆಯ ಪ್ರತಿಯನ್ನು ಎಲ್ಲಾ ಘಟಕ, ಕಾರ್ಯಾಗಾರ, ಕಚೇರಿ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು. ಆ ಮೂಲಕ ಈ ವಿಚಾರವನ್ನು ಎಲ್ಲಾ ನೌಕರರ ಗಮನಕ್ಕೆ ತರಲಾಗುವುದು ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…