ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಹನಿಟ್ರ್ಯಾಪ್‌ಗೆ ಬಂದವರು ನನ್ನ ಹತ್ಯೆಗೆ ಯತ್ನಿಸಿದ್ದರು ಎಂದು ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿಗೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ. ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದರು.
ನವೆಂಬರ್.16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕಲು ಸ್ವಲ್ಪ ಜನ ಬಂದಿದ್ದರು. ಆ ವೇಳೆ ನನ್ನನ್ನು ಹತ್ಯೆ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಈ ಬಗ್ಗೆ ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಣ್ಣ ಹನಿಟ್ರ್ಯಾಪ್ ಪ್ರಕರಣ ಸಿಐಡಿಗೆ ಹೋಗಿದೆ. ಪೊಲೀಸರು ರಾಜಣ್ಣ ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಮನೆ ಕೆಲಸದವರ ಹೇಳಿಕೆಯನ್ನು ಸಹ ಪಡೆದಿದ್ದಾರೆ. ಈ ಪ್ರಕರಣದ ನಾಯಕ ಯಾರು ಎಂದು ಗೊತ್ತಾಗುತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.





