ಬೆಂಗಳೂರು : ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ರಾತ್ರಿ ಬಂಧಿಸಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಪ್ರತಿಕ್ರಿಯಿಸಿದ್ದಾರೆ.
ʼʼಬಿಗ್ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಎಂಬವರು ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾರೆ ಎಂಬ ಆ ದೂರಿನ ಆಧಾರದ ಮೇಲೆ ನಮ್ಮ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಬಂಧನ ಮಾಡಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದುʼʼ ಎಂದು ಅವರು ಹೇಳಿದರು.
ʼʼವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ನನಗೆ ಇದರ ಬಗ್ಗೆ ನಿನ್ನೆ ನಮ್ಮ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ಕೊಟ್ಟಿದಾರೆ. ತನಿಖೆ ನಡೆಸಿ ಹುಲಿಯ ಉಗುರು ಎಂದು ಗುರುತಿಸಿದ ಮೇಲೆ ಕಾನೂನು ರೀತಿ ಕ್ರಮ ಜರುಗಿಸುತ್ತಾರೆʼʼ ಎಂದು ಅವರು ತಿಳಿಸಿದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…