ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡಗಿ ಬಳಿ ಇರುವ ಬಿಗ್‌ಬಾಸ್ ಮನೆಯನ್ನು ತೆರೆಯಲಾಗಿದ್ದು, ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.
ನಸುಕಿನ ಜಾವ 2.45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋ ಗೇಟ್ ಸೀಲ್ ಓಪನ್ ಮಾಡಿದ್ದಾರೆ.
ಬಾಗಿಲು ರೀ ಓಪನ್ ಆಗುತ್ತಿದ್ದಂತೆ ರಾತ್ರೋರಾತ್ರಿ ಬಿಗ್‌ಬಾಸ್ ಸಿಬ್ಬಂದಿ ಕ್ಯಾಬ್ ಮೂಲಕ ಆಗಮಿಸಿದ್ದಾರೆ. ಜೊತೆಗೆ ಬಿಡದಿಯ ರೆಸಾರ್ಟ್‌ನಲ್ಲಿದದ ಸ್ಪರ್ಧಿಗಳು ಕೂಡ ಮನೆಗೆ ಬಂದಿದ್ದಾರೆ.





