Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಬಿಗ್‌ಬಾಸ್‌ ಮನೆ ಸೀಜ್: ಸಚಿವ ಈಶ್ವರ್‌ ಖಂಡ್ರೆ ಮೊದಲ ಪ್ರತಿಕ್ರಿಯೆ

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಬಿಗ್‌ಬಾಸ್‌ ಶೋ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋ ಸೀಜ್‌ ಮಾಡಲಾಗಿದೆ.

ಬಿಗ್‌ಬಾಸ್‌ ಮನೆಯನ್ನು ಗೇಟ್‌ಗೆ ಬೀಗ ಜಡಿದು ಬಂದ್‌ ಮಾಡಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಗೇಟ್‌ ಬಂದ್‌ ಮಾಡಿದ್ದಾರೆ. ಈ ಬೆಳವಣಿಗೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ, ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೇ ಕಾರ್ಯಾಚರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ನೀಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್‌ ಈಶ್ವರ್‌

ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

Tags:
error: Content is protected !!