Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಎರಡೇ ವಾರಕ್ಕೆ ಬಂದ್‌ ಆಯ್ತು ಬಿಗ್‌ ಬಾಸ್‌ ಹೌಸ್‌

ಬೆಂಗಳೂರು: ಕನ್ನಡ ಬಿಗ್‌ಬಾಸ್‌ ಸೀಜನ್‌ 12ಕ್ಕೆ ಸಂಕಷ್ಟ ಎದುರಾಗಿದೆ.

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಶುರುವಾದ ಎರಡನೇ ವಾರಕ್ಕೆ ಬಿಗ್‌ಬಾಸ್‌ ಬಂದ್‌ ಆಗಿದೆ. ಬಿಗ್‌ಬಾಸ್‌ ಶೋ ನಡೆಯುತ್ತಿದ್ದ ಜಾಲಿವುಡ್‌ ಸ್ಟುಡಿಯೋಗೆ ಬೀಗಮುದ್ರೆ ಹಾಕಲಾಗಿದೆ.

ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್‌ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್‌ಗಳನ್ನು ಹಾಕಿ ಕನ್ನಡ ಬಿಗ್‌ಬಾಸ್‌ ಸೀಜನ್‌ 12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್‌ಬಾಸ್‌ ಶೋ ಹಾಗೂ ಸೆಟ್‌ಗಳಲ್ಲಿ ಪರಿಸರ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿತ್ತು.

ಅಲ್ಲದೇ ಜಾಲಿವುಡ್‌ ಸ್ಟುಡಿಯೋವಾಗಲಿ, ಬಿಗ್‌ಬಾಸ್‌ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ.

ಈ ಹಿನ್ನೆಲೆಯಲ್ಲಿ ಬಿಗ್‌ ಬಾಸ್‌ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್‌ ಜಾರಿ ಮಾಡಿದ್ದರು.

ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್‌ ಈಶ್ವರ್‌

ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್‌, ಪೊಲೀಸ್‌ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್‌ ಸ್ಟುಡಿಯೋಗೆ ಬೀಗ ಮುದ್ರೆ ಹಾಕಿದ್ದಾರೆ.

ಬಿಗ್‌ ಬಾಸ್‌ ಶೋ ಹೌಸ್‌ಗೂ ಬೀಗ ಜಡಿಯಲಾಗಿದ್ದು, ಬಿಗ್‌ಬಾಸ್‌ ಶೋ ಬಂದ್‌ ಆಗಿದೆ.

ಬಿಗ್‌ಬಾಸ್‌ ಸ್ಫರ್ಧಿಗಳನ್ನು ಸ್ಥಳದಿಂದ ಹೊರಗೆ ಕಳುಹಿಸಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿಯೇ ಜಾಲಿವುಡ್‌ ಸ್ಟುಡಿಯೋಗೆ ಬೀಗ ಹಾಕಲಾಗಿದ್ದು, ಸದ್ಯ ಬಿಗ್‌ ಬಾಸ್‌ ಕಾರ್ಯಕ್ರಮ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.

Tags:
error: Content is protected !!