ಬೆಂಗಳೂರು: ಕನ್ನಡ ಬಿಗ್‌ಬಾಸ್ ಸೀಜನ್ 12ಕ್ಕೆ ಸಂಕಷ್ಟ ಎದುರಾಗಿದೆ.
ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಶುರುವಾದ ಎರಡನೇ ವಾರಕ್ಕೆ ಬಿಗ್‌ಬಾಸ್ ಬಂದ್ ಆಗಿದೆ. ಬಿಗ್‌ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗಮುದ್ರೆ ಹಾಕಲಾಗಿದೆ.
ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್‌ಗಳನ್ನು ಹಾಕಿ ಕನ್ನಡ ಬಿಗ್‌ಬಾಸ್ ಸೀಜನ್ 12ನ್ನು ನಡೆಸಲಾಗುತ್ತಿತ್ತು. ಆದರೆ ಬಿಗ್‌ಬಾಸ್ ಶೋ ಹಾಗೂ ಸೆಟ್‌ಗಳಲ್ಲಿ ಪರಿಸರ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು.
ಅಲ್ಲದೇ ಜಾಲಿವುಡ್ ಸ್ಟುಡಿಯೋವಾಗಲಿ, ಬಿಗ್‌ಬಾಸ್ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ.
ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್ ಜಾರಿ ಮಾಡಿದ್ದರು.
ಇದನ್ನೂ ಓದಿ:-ಸಚಿವ ಸಂಪುಟ ವಿಸ್ತರಣೆಯಾಗಲಿದೆ, ನನಗೂ ಸಚಿವ ಸ್ಥಾನ ಸಿಗಲಿದೆ: ಶಾಸಕ ಪ್ರದೀಪ್ ಈಶ್ವರ್
ಈ ಹಿನ್ನೆಲೆಯಲ್ಲಿ ಬಿಡದಿ ತಹಶಿಲ್ದಾರ್, ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಬೀಗ ಮುದ್ರೆ ಹಾಕಿದ್ದಾರೆ.
ಬಿಗ್ ಬಾಸ್ ಶೋ ಹೌಸ್‌ಗೂ ಬೀಗ ಜಡಿಯಲಾಗಿದ್ದು, ಬಿಗ್‌ಬಾಸ್ ಶೋ ಬಂದ್ ಆಗಿದೆ.
ಬಿಗ್‌ಬಾಸ್ ಸ್ಫರ್ಧಿಗಳನ್ನು ಸ್ಥಳದಿಂದ ಹೊರಗೆ ಕಳುಹಿಸಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿಯೇ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದ್ದು, ಸದ್ಯ ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…