ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಕಳೆದ ಒಂದು ತಿಂಗಳ ಹಿಂದೆ ರಜತ್ ಹಾಗೂ ವಿನಯ್ ಗೌಡ ಮಚ್ಚು ಹಿಡಿದು ನಟ ದರ್ಶನ್ ಸಿನಿಮಾ ಹಾಡಿಗೆ ರೀಲ್ಸ್ ಮಾಡಿದ್ದರು.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆ ಬಸವೇಶ್ವರ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ಆದರೆ ಇಲ್ಲಿಯವರೆಗೂ ರೀಲ್ಸ್‌ಗೆ ಬಳಸಿದ ಅಸಲಿ ಮಚ್ಚನ್ನು ಪೊಲೀಸರಿಗೆ ಕೊಟ್ಟಿರಲಿಲ್ಲ. ಹಾಗಾಗಿ ಆ ಮಚ್ಚಿನ ಬಗ್ಗೆ ಮಾಹಿತಿ ನೀಡುವಂತೆ ರಜತ್‌ಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಬರಲು ಸೂಚನೆ ನೀಡಲಾಗಿದೆ.
ಇನ್ನು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಕೇಸ್‌ನಲ್ಲಿ ಮಾರ್ಚ್.24ರಂದು ಅರೆಸ್ಟ್ ಆಗಿದ್ದ ರಜತ್ ಹಾಗೂ ವಿನಯ್ ಗೌಡ ಮಾರ್ಚ್.28ರಂದು ಷರತ್ತುಬದ್ಧ ಜಾಮೀನಿನ ಮೇಳೆ ಬಿಡುಗಡೆಯಾಗಿದ್ದರು.