ಬೆಂಗಳೂರು: ಬೈಕ್‌ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಕನೇ ಪರಿಹಾರ ಪಾವತಿಸಬೇಕು. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಹಿಂಬದಿ ಸವಾರ ಮೂರನೇ ವ್ಯಕ್ತಿ(ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಇದೇ ವೇಳೆ ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣ ಇನ್ಸೂರೆನ್ಸ್ ಕಂಪೆನಿಗೆ ಪರಿಹಾರ ಪಾವತಿಸಲು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೇ, ಜಿ, ನ್ಯಾಯಮಂಡಳಿ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಮೃತನ ಕುಟುಂಬಸ್ಥರಿಗೆ ನೀಡುವಂತೆ ವಾಹನದ(ಹೀರೋ ಹೋಂಡಾ ಬೈಕ್) ಮಾಲೀಕ ನಿಸಾಮುದ್ದೀನ್ ಅವರಿಗೆ ಹೈಕೋರ್ಟ್ ಆದೇಶಿಸಿದೆ.
ವಾಹನದ ಆಸನದ ಸಾಮಥ್ಯವು 1+1 ಆಗಿದ್ದು, ಅದರ ಆಧಾರದ ಮೇಲೆ ನ್ಯಾಯಮಂಡಳಿಯು ವಿಮಾ ಕಂಪೆನಿಯ ಮೇಲೆ ಪರಿಹಾರ ನೀಡುವ ಹೊಣೆಗಾರಿಕೆಯನ್ನು ನಿಗದಿಪಡಿಸಿದೆ, ನ್ಯಾಯಾಧಿಕರಣದ ಆದೇಶ ಸೂಕ್ತವಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ ಪರಿಹಾರ ಪಾವತಿಸುವ ಹೊಣೆಯನ್ನು ಬೈಕ್ ಮಾಲೀಕನಿಗೆ ವರ್ಗಾಯಿಸಿದೆ.
ಪ್ರಕರಣವೇನು?: 2011ರ ಮಾ.24ರಂದು ಮೃತ ಸಿದ್ದಿಕ್ ಉಲ್ಲಾಖಾನ್ ಎಂಬುವವರು ಕುಣಿಗಲ್ ಬಳಿ ನಿಸಾಮುದ್ದೀನ್ ಅವರ ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತು ಸವಾರಿ ಮಾಡುತ್ತಿದ್ದರು. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ಹೀರೋ ಹೋಂಡಾ ಬೈಕ್ ಹಳ್ಳಕ್ಕೆ ಬಿದ್ದಿತ್ತು. ಈ ವೇಳೆ ತೀವ್ರವಾಗಿ ಗಾಯಗೊಂಡ ಖಾನ್ ಅವರನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾರ್ಚ್ 26, 2011 ರಂದು ಖಾನ್ ಮೃತಪಟ್ಟಿದ್ದರು.
ನಂತರ ಖಾನ್ ಕುಟುಂಬ ಸದಸ್ಯರು ಪರಿಹಾರ ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅಲ್ಲದೇ, ಖಾನ್ ಚಿಕಿತ್ಸೆ ಮತ್ತು ಇತರ ವೆಚ್ಚಗಳಿಗಾಗಿ 1.2 ಲಕ್ಷ ರೂ.ಖರ್ಚು ಮಾಡಿದ್ದು, ಒಟ್ಟು 15 ಲಕ್ಷ ರೂ.ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಕುಣಿಗಲ್‌ನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಮಂಡಳಿ 2017ರ ಆ.24ರಂದು, ವಾರ್ಷಿಕ ಶೇ.6ಬಡ್ಡಿಯೊಂದಿಗೆ 7,27,114 ರೂ.ಗಳನ್ನು ಪರಿಹಾರವಾಗಿ ನೀಡುವಂತೆ ವಿಮಾ ಸಂಸ್ಥೆಗೆ ಆದೇಶಿಸಿತ್ತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…