ಬೆಂಗಳೂರು : ಬೈಕ್ ಟ್ಯಾಕ್ಸಿ ಸೇವೆ ಆರಂಭಕ್ಕೆ ಅನುಮತಿ ನೀಡಿದರೆ ಸಂಚಾರ ದಟ್ಟಣೆ, ರಸ್ತೆ ಅಪಘಾತ ಹೆಚ್ಚಾಗುವುದಲ್ಲದೆ ಮಹಿಳೆಯರ ಸುರಕ್ಷತೆಗೂ ಸವಾಲಾಗಲಿದೆ ಎಂದು ಉನ್ನತಾಧಿಕಾರಿಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸುವ ಬಗ್ಗೆ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಸೇವೆ ಅಗತ್ಯತೆ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸರ್ಕಾರ ಸಾರಿಗೆ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.
ಇದೀಗ ವರದಿ ಸಿದ್ದಪಡಿಸಿರುವ ಸಮಿತಿಯು ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿಸುವುದರಿಂದ ಸೃಷ್ಟಿಯಾಗುವ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದೇ ವರದಿಯನ್ನು ನ್ಯಾಯಲಯಕ್ಕೂ ಸಲ್ಲಿಸಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಳ್ಳಲಾಗಿದೆ.
ಕಳೆದ 2015 ರಿಂದ ಇಲ್ಲಿಯವರೆಗೆ ಬೈಕ್‍ಗಳ ಸಂಖ್ಯೆ ಶೇ.98ರಷ್ಟು ಮತ್ತು ಕಾರುಗಳ ಸಂಖ್ಯೆ ಶೇ.79ರಷ್ಟು ಹೆಚ್ಚಳವಾಗಿದೆ. ಅದೇ ಸಮೂಹ ಸಾರಿಗೆಯಾದ ಬಿಎಂಟಿಸಿ ಬಸ್‍ಗಳ ಸಂಖ್ಯೆ ಕೇವಲ ಶೇ.14ರಷ್ಟು ಮಾತ್ರ ಹೆಚ್ಚಳವಾಗಿದೆ. ಸದ್ಯ ಬೆಂಗಳೂರಿನಲ್ಲಿ 82.83 ಲಕ್ಷ ಬೈಕ್‍ಗಳು, 23.83 ಲಕ್ಷ ಕಾರುಗಳು ಸೇರಿ ಒಟ್ಟು 1.06 ಕೋಟಿ ಬೈಕ್ ಮತ್ತು ಕಾರುಗಳು ಇವೆ.
ಇದನ್ನು ಓದಿ: ರಾಜ್ಯಕ್ಕೆ 9 ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ : ಕೇಂದ್ರ ಸ್ಪಂದನೆ
ಈಗಾಗಲೇ ವಾಹನಗಳ ಸಂಖ್ಯೆಲ್ಲಿ ಭಾರಿ ಏರಿಕೆಯಾಗಿರುವುದರಿಂದ ಬೈಕ್ ಟ್ಯಾಕ್ಸಿಗಳಿಗೆ ಅನುಮತಿಸಿದರೆ ನಗರದಲ್ಲಿ ಬೈಕ್‍ಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ನಗರದ ಸಂಚಾರ ದಟ್ಟಣೆ ಅಸ್ತವ್ಯಸ್ತಗೊಳ್ಳಲಿದೆ ಎನ್ನುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೈಕ್ ಟ್ಯಾಕ್ಸಿಗೆ ಅನುಮತಿ ನೀಡುವ ಬದಲು ಜನ ಸಮೂಹ ಸಾರಿಗೆಗೆ ಹೆಚ್ಚಳಕ್ಕೆ ಕ್ರಮ ಕೈಗೊಂಡರೆ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ, ಮಾಲಿನ್ಯ ಪ್ರಮಾಣವೂ ಇಳಿಕೆಯಾಗಲಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಬಸ್ ಪ್ರಯಾಣಕ್ಕೆ ಹೋಲಿಸಿದರೆ ಬೈಕ್ ಟ್ಯಾಕ್ಸಿ ಶುಲ್ಕ ದುಬಾರಿಯಾಗುತ್ತದೆ. ಬಿಎಂಟಿಸಿ ಬಸ್‍ನಲ್ಲಿ ಎರಡು ಕಿಮೀಗೆ ಆರು ರೂ. ನೀಡಬೇಕು ಅದೇ ಬೈಕ್ ಟ್ಯಾಕ್ಸಿಯಲ್ಲಿ 48 ರೂ.ಗಳ ದರ ನೀಡಬೇಕಾಗುತ್ತದೆ. ಇದು ಸಹ ಸಾರ್ವಜನಿಕರಿಗೆ ಹೊರೆಯಾಗುವುದು ಗ್ಯಾರಂಟಿ ಎಂದು ವರದಿ ಹೇಳಿದೆ.
ಬೈಕ್ ಟ್ಯಾಕ್ಸಿಸೇವೆಯಿಂದ ಪರಿಸರಕ್ಕೆ ಹಾನಿ ಉಂಟಾಗಲಿದೆ. ಈ ಹಿಂದೆ ಸಾರಿಗೆ ಇಲಾಖೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಯಮ ರೂಪಿಸಿದ್ದ ಸಂದರ್ಭದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಕಿರುಕುಳ ಹೆಚ್ಚಾಗಿತ್ತು. ಈಗಲೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದರೆ, ಮಹಿಳಾ ಪ್ರಯಾಣಿಕರ ಮೇಲಿನ ದೌರ್ಜನ್ಯ ಮತ್ತಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಎಚ್ಚರಿಸಲಾಗಿದೆ.
ವಿಮೆ ಇಲ್ಲದಿರುವ ಬೈಕ್‍ಗಳ ಬಳಕೆ ಸಂದರ್ಭದಲ್ಲಿ ಸಂಭವಿಸುವ ಅಪಘಾತದದಲ್ಲಿ ವಿಮಾ ಸೌಲಭ್ಯ ದೊರೆಯುವುದು ಅಸಾಧ್ಯವಾಗಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಬಾರದು ಎಂದು ಸಮಿತಿಯ ಎಲ್ಲಾ ಸದಸ್ಯರು ಒಮತದ ನಿರ್ಧಾರ ತಿಳಿಸಿರುವುದು ವಿಶೇಷವಾಗಿದೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…