Mysore
26
broken clouds

Social Media

ಸೋಮವಾರ, 26 ಜನವರಿ 2026
Light
Dark

ರಾಜ್ಯದಲ್ಲಿ ಇಂದಿನಿಂದ ಬೈಕ್‌ ಟ್ಯಾಕ್ಸಿ ಆರಂಭ

taxi bike

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ(ಆ.21) ಬೈಕ್ ಟ್ಯಾಕ್ಸಿ ಸೇವೆ ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್​ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್​ಗಳಿಗೆ ದುಬಾರಿ ಹಣ ಪಾವತಿಸುತ್ತಿದ್ದ ಜನರಿಗೆ ಸ್ವಲ್ಪ ರಿಲೀಫ್ ಸಿಗಲಿದೆ.

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್‌ ಟ್ಯಾಕ್ಸಿಗಳ ಮೇಲೆ ಆರ್‌ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು.

ಬೈಕ್ ಟ್ಯಾಕ್ಸಿಗೆ ನೀತಿ ಚೌಕಟ್ಟು ನಿಗದಿಪಡಿಸಲು ಸೂಚನೆ
ಇದರ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಸೇವೆ ರದ್ದು ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಸದ್ಯ ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಸೆಪ್ಟೆಂಬರ್ 22ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸದ್ಯ ರಾಜ್ಯ ಸರ್ಕಾರ ಇಂದಿನಿಂದ ಬೈಕ್ ಟ್ಯಾಕಿ ಸೇವೆಯನ್ನು ಆರಂಭಿಸಿದೆ.

ಬೈಕ್ ಟ್ಯಾಕಿ ಸೇವೆ ಆರಂಭ ಬೆನ್ನಲ್ಲೇ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತ ಯೋಗೀಶ್ ಸಾರಿಗೆ ಸಚಿವರ ಭೇಟಿಗೆ ತೆರಳಲಿದ್ದಾರೆ. ಇನ್ನೂ ಕೆಲವೇ ಕ್ಷಣಗಳಲ್ಲಿ ಕೋರ್ಟ್ ನಿರ್ದೇಶನ ಪ್ರತಿ ಸಾರಿಗೆ ಇಲಾಖೆಗೆ ಅಧಿಕೃತವಾಗಿ ಸಾರಿಗೆ ಅಧಿಕಾರಿಗಳ ಕೈಸೇರುವ ಸಾಧ್ಯತೆ ಇದೆ. ತಲುಪಿದ ನಂತರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂದು ಇಲಾಖೆ ಚಿಂತನೆ ನಡೆಸಲಿದೆ. ಸದ್ಯ ಈ ಬಗ್ಗೆ ಮಾಧ್ಯಮಗಳಿಗೆ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ.

Tags:
error: Content is protected !!