Mysore
24
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಪರಿಣಾಮ ಬೈರತಿ ಬಸವರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ಸಹ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದ ನಂತರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ಅರ್ಜಿಯನ್ನು ‘ವಾಪಸ್ ಪಡೆದುಕೊಂಡಿದ್ದಾಗಿ’ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – ವಿಮಾನದಲ್ಲಿ ಅಹಮದಾಬಾದ್​​ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ.

ಸಿಐಡಿ ತನಿಖೆಯಲ್ಲಿ ಅವರು ಕೊಲೆಯ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ನೇರ ಸಂಪರ್ಕ ಇದ್ದುದು ಬಹಿರಂಗವಾಗಿದೆ. ಬೈರತಿ ಬಸವರಾಜ್ ಅವರು ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.

Tags:
error: Content is protected !!