ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಪರಿಣಾಮ ಬೈರತಿ ಬಸವರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ ಸಹ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದ ನಂತರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ಅರ್ಜಿಯನ್ನು ‘ವಾಪಸ್ ಪಡೆದುಕೊಂಡಿದ್ದಾಗಿ’ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ.
ಸಿಐಡಿ ತನಿಖೆಯಲ್ಲಿ ಅವರು ಕೊಲೆಯ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವಿದ್ದು, ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ನೇರ ಸಂಪರ್ಕ ಇದ್ದುದು ಬಹಿರಂಗವಾಗಿದೆ. ಬೈರತಿ ಬಸವರಾಜ್ ಅವರು ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…