ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆ ಅಂತ್ಯವಾಗಿದೆ.
ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಸಿಬಿ ಪ್ರಕಾಶ್ ರಾಥೋಡ್ ಅವರು ಭೈರತಿ ಬಸವರಾಜ್‌ರನ್ನು ವಿಚಾರಣೆ ನಡೆಸಿದರು.
ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದ ಭೈರತಿ ಬಸವರಾಜ್ ಅವರು, ಸುಮಾರು 3 ರಿಂದ 4 ಗಂಟೆಗಳ ಕಾಲ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದಿದ್ದಾರೆ.





