Mysore
27
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Byrathi Basavaraj

ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್‌ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ ಆದೇಶಿಸಿದೆ.

ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪನ್ನು ನೀಡಿದೆ. ಪ್ರಕರಣದ ಗಂಭೀರತೆ ಮತ್ತು ತನಿಖೆಯ ಅಗತ್ಯವನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿತ ಶಾಸಕರಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ.

 

 

Tags:
error: Content is protected !!