ರಾಜ್ಯ

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ತೃತೀಯ ಭಾಷಾ ವಿಷಯಕ್ಕೆ ಅಂಕಗಳಿಗೆ ಬದಲಾಗಿ ಗ್ರೇಡ್ ನೀಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುಷಿಪಡಿಸಲು ಬಿಜೆಪಿಯವರು ಹಿಂದಿ… ಹಿಂದಿ ಎಂದು ಪ್ರಮೋಟ್ ಮಾಡುತ್ತಿರುವುದು ಸರಿಯಲ್ಲ. ಎಲ್ಲಾ ಕಡೆಯು ಎರಡು ಭಾಷೆ ಮಾತ್ರ ಜಾರಿಯಲ್ಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ತೃತೀಯ ಭಾಷೆ ಹೇರಿಕೆಯಾಗಿದೆ. ಕೆಲವು ಕಡೆ ಕನ್ನಡ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಕಲಿಯುತ್ತಿದ್ದಾರೆ. ನಮ ಕನ್ನಡಿಗರು ಹೊಟ್ಟೆಪಾಡಿಗಾಗಿ ಹಿಂದಿ ಬೋಧನೆ ಮಾಡುತ್ತಿದ್ದಾರೆ. ಅಂಥವರಿಗೆ ಯಾವುದೇ ಒತ್ತಡ ಆಗಬಾರದು. ಅಲ್ಲದೆ ಯಾವುದೇ ಭಾಷೆ ವಿರುದ್ಧ ನಾವಿಲ್ಲ. ಈಗ ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು ಎಂಬುದನ್ನು ಮುಖ್ಯಮಂತ್ರಿಯವರು ಹೇಳಿದ್ದಾರೆಂದು ತಿಳಿಸಿದರು.

ಬಿಜೆಪಿಯವರು ಟೀಕೆಟಿಪ್ಪಣಿ ಮಾಡುತ್ತಾರೆಂದು ಉತ್ತರ ಕೊಡಲು ಆಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಆಳಿದವರು. ಅವರಿಗೆ ಗೌರವ ಕೊಡುತ್ತೇವೆ. ಆದರೆ ಕನ್ನಡಿಗರಿಗೆ ಮೋಸ ಮಾಡಿದವರೇ ಅವರು. ರಾಜ್ಯದ ತೆರಿಗೆ ಸಂಗ್ರಹ ಕುರಿತಂತೆ ಬಿಜೆಪಿಯವರು ದನಿ ಎತ್ತುವುದಿಲ್ಲ. ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬರಗಾಲ ಬಂದಾಗಲೂ ಬಿಜೆಪಿಯವರು ದನಿ ಎತ್ತುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

1 hour ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

1 hour ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

1 hour ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

1 hour ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

1 hour ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

2 hours ago