ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ವಿಧೇಯಕ-2025ನ್ನು ಮಂಡನೆ ಮಾಡಿದರು.
ಕಿರುಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಿಧೇಯಕ-2025ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು ಸಾಲಗಳಲ್ಲೇ ಮುಳುಗಿ ಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶವಿದೆ.
ಬಲವಂತದ ಹಾಗೂ ಅಮಾನವೀಯ ಸಾಲ ವಸೂಲಾತಿಯಲ್ಲಿ ತಪ್ಪತಸ್ಥರಿಗೆ ಹತ್ತು ವರ್ಷಗಳಿಗೆ ವಿಸ್ತರಿಸಬಹುದಾದ ಜೈಲುವಾಸ, 5 ಲಕ್ಷರೂ ವರೆಗೆ ವಿಸ್ತರಿಸಬಹುದಾದ ದಂಡವನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಜಾರಿ ಮಾಡಿದ್ದ ಕಾನೂನನ್ನು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.





