ಬೆಂಗಳೂರು: ರಾಜ್ಯಕ್ಕೆ ಮತ್ತು ಇಲ್ಲಿನ ಕಂಪನಿಗಳಿಗೆ ಹೂಡಿಕೆ ಸೆಳೆಯುವ ಉದ್ದೇಶದಿಂದ ಐಟಿ ಬಿಟಿ ಇಲಾಖೆ ಜೂನ್ ಮಧ್ಯಭಾಗದಲ್ಲಿ ವಿದೇಶಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದು ಫಲ ನೀಡುವ ಲಕ್ಷಣಗಳಿವೆ.
ವಿದೇಶಗಳಲ್ಲಿ ಕರ್ನಾಟಕದ ಸ್ಟಾರ್ಟಪ್ ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಯಲು ಮಾಡಿರುವ ರೋಡ್ ಶೋಗಳ ಪರಿಣಾಮ ಇದೀಗ 6.2 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆಯನ್ನು ರಾಜ್ಯ ನಿರೀಕ್ಷಿಸುತ್ತಿದೆ. ಇದರ ಪರಿಣಾಮವಾಗಿ 35 ಸಾವಿರದಿಂದ 40 ಸಾವಿರ ಉದ್ಯೋಗ ಸೃಷ್ಟಿಯ ಭರವಸೆಯೂ ಮೂಡಿದೆ ಎಂದು ಅಂದಾಜಿಸಲಾಗಿದೆ.
ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಅಧಿಕಾರಿಗಳು ಜೂನ್ ಮಧ್ಯಭಾಗದಲ್ಲಿ ರೋಡ್ ಶೋಗಳ ಮೂಲಕ ವಿವಿಧ ದೇಶಗಳೊಂದಿಗೆ ಹೊಸದಾಗಿ ಸಹಯೋಗವನ್ನು ಬೆಳೆಸಲು ಹಲವಾರು ನಗರಗಳಿಗೆ ಭೇಟಿ ನೀಡಿದ್ದರು.
6.2 ಬಿಲಿಯನ್ ಡಾಲರ್ ಹೂಡಿಕೆಯನ್ನು ನಿರೀಕ್ಷಿಸಲಾಗಿದ್ದು, ಉದ್ದೇಶಿತ ಜಾಗತಿಕ ಸಾಮರ್ಥ್ಯ ಕೇಂದ್ರಗಳು ರಾಜ್ಯದಲ್ಲಿ ಹಲವು ಉದ್ಯೋಗ ಸೃಷ್ಟಿಸಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ರೋಡ್ ಶೋಗಳ ಮುಖ್ಯ ಉದ್ದೇಶಗಳೆಂದರೆ ಕರ್ನಾಟಕದ ಜೈವಿಕ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಪರಿಸರ ವ್ಯವಸ್ಥೆಯನ್ನು ವಿದೇಶಗಳಲ್ಲಿ ಪರಿಚಯಿಸುವುದಾಗಿದೆ. ಇದರಿಂದ ರಾಜ್ಯದಲ್ಲಿ ವಿದೇಶಿ ಹೂಡಿಕೆ ಹರಿದು ಬರಲು ಅನುಕೂಲವಾಗಲಿದೆ ಎಂದು ಹೇಳಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…