Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್‌ಗೆ ಅನುಮತಿ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೇ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್‌ ಈ ಪರಿಸರಕ್ಕೆ ಮಾರಕವಾಗಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವ ಉತ್ಪನ್ನದ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಸಿಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕೈಚೀಲ ಪರಿಸರಕ್ಕೆ ಮಾರಕವಲ್ಲ. ಇದು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾದಲ್ಲಿ ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದರು.

ಸಭೆಯಲ್ಲಿ ಅಧಿಕಾರೇತರ ಸದಸ್ಯರಾದ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಮತ್ತಿತರರು ಉಪಸ್ಥಿತರಿದ್ದರು.

 

 

Tags: