ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ, ಸುಟ್ಟರೇ ವಾತಾವರಣವನ್ನೇ ಕಲುಷಿತಗೊಳಿಸುವ ಏಕ ಬಳಕೆ ಪ್ಲಾಸ್ಟಿಕ್ ಈ ಪರಿಸರಕ್ಕೆ ಮಾರಕವಾಗಿದೆ. ಇದಕ್ಕೆ ಪರ್ಯಾಯವಾಗಿ ಜೈವಿಕವಾಗಿ ಕೊಳೆಯುವ ಉತ್ಪನ್ನದ ಅಗತ್ಯವಿದೆ ಎಂದರು.
ಈ ನಿಟ್ಟಿನಲ್ಲಿ ಜೈವಿಕವಾಗಿ ವಿಘಟನೆಯಾಗುವ ಸಸ್ಯಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಚೀಲಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಸಿಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕೈಚೀಲ ಪರಿಸರಕ್ಕೆ ಮಾರಕವಲ್ಲ. ಇದು ವೈಜ್ಞಾನಿಕವಾಗಿ ವಿಘಟನೆಯಾಗುತ್ತದೆ ಎಂದು ಸಾಬೀತಾದಲ್ಲಿ ಇದಕ್ಕೆ ಶೀಘ್ರ ಅನುಮತಿ ನೀಡಿ ಎಂದರು.
ಸಭೆಯಲ್ಲಿ ಅಧಿಕಾರೇತರ ಸದಸ್ಯರಾದ ಶರಣಕುಮಾರ ಮೋದಿ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಪಿ.ರವಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…