ಬೆಂಗಳೂರು: ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಹಣ ತಲುಪುವುದನ್ನು ಖಚಿತಪಡಿಸಿಕೊಳ್ಳಲು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬರಲಿದೆ.
ಯೋಜನೆಯ ಹಣವು ನಿಜವಾದ ಅರ್ಹ ಮಹಿಳೆಯರಿಗೆ ಮಾತ್ರ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮತ್ತು ಅನರ್ಹರು ಅಥವಾ ಮೃತ ವ್ಯಕ್ತಿಗಳ ಹೆಸರಿನಲ್ಲಿ ಹಣ ದುರ್ಬಳಕೆಯಾಗುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ. ಡಿಜಿಟಲ್ ದೃಢೀಕರಣದ ಮೂಲಕ ಹಣ ವರ್ಗಾವಣೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವುದು ಇದರ ಪ್ರಮುಖ ಗುರಿಯಾಗಿದೆ.
ಬಯೋಮೆಟ್ರಿಕ್‍ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ 2 ಸಾವಿರ ರೂ. ಅಮೌಂಟ್ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಪ್ರತಿ ಫಲಾನುಭವಿ 5 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.
ಬಯೋಮೆಟ್ರಿಕ್ ಜೊತೆಗೆ ಗೃಹಲಕ್ಷ್ಮಿ ಸೊಸೈಟಿಗೆ ಸದಸ್ಯತ್ವವನ್ನ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಡಿಕೊಳ್ತಿದೆ. ಸದಸ್ಯತ್ವ ಬಯಸುವ ಫಲಾನುಭವಿಗಳು 1,250 ರೂ. ಪಾವತಿ ಮಾಡಬೇಕಿದೆ. ಒಂದು ವೇಳೆ ಗೃಹಲಕ್ಷ್ಮಿ ಸೊಸೈಟಿ ಸದಸ್ಯತ್ವ ಬೇಡ ಅಂದರೆ ಬಯೋಮೆಟ್ರಿಕ್ ಅಷ್ಟೇ ಮಾಡಿಸಿಕೊಳ್ಳಬಹುದು. ಮುಂದಿನ ತಿಂಗಳ ಒಳಗಡೆ ಬಯೋಮೆಟ್ರಿಕ್ ಜಾರಿ ಮಾಡುವ ಚಿಂತನೆಯಲ್ಲಿದ್ದು, ಈಗಾಗಲೇ ಗೃಹಲಕ್ಷ್ಮಿ ಬಯೋಮೆಟ್ರಿಕ್‍ಗಾಗಿ ಆಪ್ ಸಿದ್ಧಪಡಿಸಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…