Mysore
17
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಹಕ್ಕಿ ಜ್ವರ ಆರ್ಭಟ: ಕೋಳಿ ಸೇವನೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹಕ್ಕಿಜ್ವರದ ಆತಂಕ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಕ್ಕಿ ಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಇಂದು ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದೆ.

ಹಕ್ಕಿ ಜ್ವರದ ಮಧ್ಯೆಯೂ ಕೋಳಿ ಸೇವನೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ.

೧) 70 ಡಿಗ್ರಿ ಸೆಂಟಿಗ್ರೇಡ್‌ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು
೨) ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು
೩) ಅಡುಗೆಗಾಗಿ ಕೋಳಿಮಾಂಸವನ್ನು ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು
೪) ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು
೫) ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನು ತಿನ್ನಬಾರದು
೬) ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ

ಇದಿಷ್ಟು ನಿಯಮಗಳನ್ನು ಜನರು ಪಾಲನೆ ಮಾಡಲೇಬೇಕು ಎಂದು ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

 

Tags:
error: Content is protected !!