Mysore
24
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಪಶುಸಂಗೋಪನಾ ಇಲಾಖೆ ನಿರ್ದೇಶನ ನೀಡಿದೆ.

ನೆರೆಯ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಕಂಡುಬರುತ್ತಿದ್ದು, ರಾಜ್ಯದಲ್ಲೂ ಆತಂಕ ಮನೆಮಾಡಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಕಾಗೆಗಳು ಮೃತಪಟ್ಟಿರುವುದು ಹಕ್ಕಿಜ್ವರದ ಭೀತಿ ಹೆಚ್ಚಾಗಲು ಕಾರಣವಾಗಿದೆ.

ಮಹಾರಾಷ್ಟ್ರದಲ್ಲೂ ಹಕ್ಕಿಜ್ವರದ ಆತಂಕ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದ ಜಿಲ್ಲೆಗಳಲ್ಲಿ ಕೋಳಿಗಳ ಸಾಗಾಣಿಕೆ ಮೇಲೆ ನಿಗಾ ವಹಿಸುವಂತೆ ಪಶುಸಂಗೋಪನಾ ಇಲಾಖೆ ಸೂಚನೆ ನೀಡಿದೆ.

ಒಂದು ವೇಳೆ ಹಕ್ಕಿಜ್ವರದ ಸೋಂಕು ಇರುವುದು ದೃಢಪಟ್ಟರೆ ಅಂತಹ ರಾಜ್ಯಗಳಿಂದ ಕೋಳಿ ರಾಜ್ಯ ಪ್ರವೇಶಿಸಲು ನಿರ್ಬಂಧ ಹೇರಲಾಗುತ್ತದೆ. ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸತ್ತ ಕೋಳಿ ಅಥವಾ ಪಕ್ಷಿಗಳು ಹಕ್ಕಿಜ್ವರದ ಸೋಂಕು ಹೊಂದಿದ್ದರೆ ಮನುಷ್ಯರಿಗೂ ಆ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ. ಇದೊಂದು ಅಪಾಯಕಾರಿ ರೋಗವಾಗಿರುವುದರಿಂದ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳಿಗೆ ಸೂಚಿಸಲಾಗಿದೆ.

Tags:
error: Content is protected !!