ಬೆಂಗಳೂರು: ಬಹುಕೋಟೆ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್‌ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಶ್ರೀಧರ್ ಕೆ.ಪೂಜಾರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಟ್ ಕಾಯಿನ್ ಕೇಸ್‌ನಲ್ಲಿ ಡಿವೈಎಸ್ಪಿ ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಶ್ರೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರನ್ನು ಒಳಗೊಂಡ ಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.





