Mysore
20
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ ಪ್ರಕಾರ , ಕರ್ನಾಟಕದಲ್ಲಿ ಶೀತಗಾಳಿ ತೀವ್ರತೆಹೇಚ್ಚಾಗಿದ್ದು 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಮತ್ತು 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ .

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ .ಇಲ್ಲಿ ಕನಿಷ್ಠ ತಾಪಮಾನ 7-10 ಡಿಗ್ರಿ ಸೆಲ್ಸಿಯಸ್‌ಗಿಳಿದಿದ್ದು, ದಾಖಲೆಯ ಚಳಿ ಇರಲಿದೆ.

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಕೂಡ ಚಳಿ ಹೆಚ್ಚಾಗಿದ್ದು, ಜನರು ಎಚ್ಚರಿಕೆ ವಹಿಸಬೇಕು.

Tags:
error: Content is protected !!