weather rain alert karnataka
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸಾಧ್ಯತೆ ಕಡಿಮೆಯಿದ್ದು, ಚಳಿ ಪ್ರಮಾಣ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬಾಗಲಕೋಟೆ ಜಿಲ್ಲೆಯಲ್ಲಿ ಚಳಿ ಮುಂದುವರೆಯಲಿದೆ. ದಾವಣಗೆರೆ, ಚಿತ್ರದುರ್ಗ, ಬಳ್ಳಾರಿಯಲ್ಲಿ ಇಂದು ಒಳಹವೆ ಇರಲಿದೆ.
ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಳಹವೆ ಇರಲಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…