ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು(ಆ.22)ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ರಾಜ್ಯಪಾಲರು ಬುಲೆಟ್ ಪ್ರೋಫ್ ಕಾರಿನಲ್ಲಿ ಓಡಾಡಲು ಕಾಂಗ್ರೆಸ್ ಕಾರಣ ಎನ್ನುವ ಬಗ್ಗೆ ಕೇಳಿದಾಗ, ಬಿಜೆಪಿ, ಜೆಡಿಎಸ್‌ನ ಕಿಡಿಗೇಡಿಗಳು ಕಲ್ಲು ಹೊಡೆಯಬಹುದು ಎನ್ನುವ ಕಾರಣಕ್ಕೆ ಪೊಲೀಸ್ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿನಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನೆತೆವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇನೆ ಎಂದು ಹೇಳಿದರು.