ರಾಜ್ಯ

ರಾಜ್ಯಪಾಲರಿಗೆ ಬಿಜೆಪಿ, ಜೆಡಿಎಸ್‌ನವರು ಕಲ್ಲು ಹೊಡೆಯಬಹುದು

ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್‌ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಇಂದು(ಆ.22)ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು  ರಾಜ್ಯಪಾಲರು ಬುಲೆಟ್‌ ಪ್ರೋಫ್‌ ಕಾರಿನಲ್ಲಿ ಓಡಾಡಲು ಕಾಂಗ್ರೆಸ್‌ ಕಾರಣ ಎನ್ನುವ ಬಗ್ಗೆ ಕೇಳಿದಾಗ, ಬಿಜೆಪಿ, ಜೆಡಿಎಸ್‌ನ ಕಿಡಿಗೇಡಿಗಳು ಕಲ್ಲು ಹೊಡೆಯಬಹುದು ಎನ್ನುವ ಕಾರಣಕ್ಕೆ ಪೊಲೀಸ್‌ ಅವರು ರಕ್ಷಣೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ಕಾಂಗ್ರೆಸ್‌ ರಾಜ್ಯಪಾಲರಿಗೆ ಅವಮಾನಿಸಿದ್ದನ್ನು ವಿರೋಧಿನಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನನ್ನು ನಿಮ್ಮನ್ನು ಯಾರನ್ನು ಬೇಕಾದರೂ ಟೀಕೆ ಮಾಡಬಹುದು. ಯಾರಿಗೆ ಯಾವ ಗೌರವ ಕೊಡಬೇಕೋ ಅದನ್ನು ಖಂಡಿತ ಕೊಡಲೇಬೇಕು. ಘನೆತೆವೆತ್ತ ರಾಜ್ಯಪಾಲರಿಗೆ ನಾವು ಖಂಡಿತಾ ಗೌರವ ನೀಡುತ್ತೇನೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

2 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

2 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

2 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

3 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

3 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

5 hours ago