ರಾಜ್ಯ

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು ಸೀಟು ಬಿಟ್ಟುಕೊಟ್ಟು, ಉಳಿದ ಮೂರು ಸೀಟುಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ.

ಬಿಜೆಪಿ ರಾಜ್ಯ ಘಟಕವು ಮಂಗಳವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಾರ ಹೀಗಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರ — ಸುಶೀಲ್ ಜಿ. ನಮೋಶಿ

ಪೂರ್ವ ಪದವೀಧರ ಕ್ಷೇತ್ರ — ಎಸ್.ವಿ. ಸಂಕನೂರ್

ಆಗ್ನೇಯ ಪದವೀಧರ ಕ್ಷೇತ್ರ — ಕೆ.ಎಂ. ಸುರೇಶ್

ಉಳಿದ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಜೆಡಿಎಸ್ ಇನ್ನೂ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.

ಮೈತ್ರಿ ಮುಂದುವರಿಕೆ
2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಜೆಡಿಎಸ್ ಜೋಡಿ, ವಿಧಾನಪರಿಷತ್ ಚುನಾವಣೆಗೂ ಮುಂದುವರೆದಿದೆ. ಜೆಡಿಎಸ್ ಆರಂಭದಲ್ಲಿ ಎರಡು ಸೀಟುಗಳಿಗೆ ಬೇಡಿಕೆ ಇಟ್ಟಿತ್ತು. ಆದರೆ ಬಿಜೆಪಿ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಮಾತ್ರ ಬಿಟ್ಟುಕೊಟ್ಟಿದೆ. ಪ್ರಸ್ತುತ ಈ ಕ್ಷೇತ್ರವನ್ನು ಕಾಂಗ್ರೆಸ್‌ನ ಪುಟ್ಟಣ್ಣ ಪ್ರತಿನಿಧಿಸುತ್ತಿದ್ದಾರೆ.

ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದ್ದು, ಪಟ್ಟಿ ಹೀಗಿದೆ

ಬೆಂಗಳೂರು ಶಿಕ್ಷಕರ ಕ್ಷೇತ್ರ — ಪುಟ್ಟಣ್ಣ
ಪಶ್ಚಿಮ ಪದವೀಧರ ಕ್ಷೇತ್ರ — ಮೋಹನ್ ಲಿಂಬಿಕೈ
ಆಗ್ನೇಯ ಪದವೀಧರ ಕ್ಷೇತ್ರ — ಶಶಿ ಹುಲಿಕುಂಟೆಮಠ
ಈಶಾನ್ಯ ಶಿಕ್ಷಕರ ಕ್ಷೇತ್ರ — ಶರಣಪ್ಪ ಮಟ್ಟೂರ್

ಈ ನಾಲ್ಕು ಕ್ಷೇತ್ರಗಳ ಅವಧಿ 2026 ನವೆಂಬರ್ 11ರಂದು ಮುಗಿಯುತ್ತದೆ. 2020ರ ಚುನಾವಣೆಯಲ್ಲಿ ಬಿಜೆಪಿ ಮೂರು ಸೀಟುಗಳನ್ನು ಗೆದ್ದಿತ್ತು. ಆದರೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಪುಟ್ಟಣ್ಣ ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.

ಚುನಾವಣೆಯು ನವೆಂಬರ್‌ನಲ್ಲಿ ನಡೆಯಲಿದ್ದು, ಅವಧಿ ಮುಗಿಯುವ ಒಂದು ತಿಂಗಳ ಮುಂಚಿತವಾಗಿ ಮತದಾನ ನಡೆಯುವ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ಮೈತ್ರಿ ಈ ಚುನಾವಣೆಯಲ್ಲಿ ತನ್ನ ಬಲ ಪ್ರದರ್ಶಿಸುವ ಎಲ್ಲ ಸಿದ್ಧತೆ ಮಾಡುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

7 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

7 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

7 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

8 hours ago