Mysore
22
overcast clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯರನ್ನ ಸರ್ವಾಧಿಕಾರಿ ಎಂದು ಜರಿದ ಬಿಜೆಪಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕೆ ಮಾಡಿದೆ. ಅಲ್ಲದೆ ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ತಮದಮ ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ಜೊತೆಗೆ ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನ ಒಪ್ಪಿಕೊಳ್ಳದ ಸಿಎಂ, ಕಾಂಗ್ರೆಸ್‌ ಸರ್ಕಾರದ ಬ್ರಹ್ಮಾಂಡ ಭ್ರಷ್ಟಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

 

Tags:
error: Content is protected !!