ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ.
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕೆ ಮಾಡಿದೆ. ಅಲ್ಲದೆ ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯ ತಮದಮ ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನ ಒಪ್ಪಿಕೊಳ್ಳದ ಸಿಎಂ, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…