ಯಾದಗಿರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಖುರ್ಚಿ ಮೇಲೆ ಕಣ್ಣಿದ್ದು, ಅದನ್ನು ಪಡೆಯಲು ಡಿಕೆ ಅವರು ಏನು ಬೇಕಾದರೂ ಮಾಡಬಹುದು? ಲೋಕಸಭಾ ಚುನಾವಣೆ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಅಥವಾ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಿಡಿ ಬಿಡಬಹುದು ಎಂದು ಸೂರಪುರ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜುಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹುಣಸಗಿ ಪಟ್ಟಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿಎಂ ಖುರ್ಚಿ ಮೇಲೆ ಡಿಕೆಶಿಗೆ ಕಣ್ಣಿದೆ ಸಿಎಂ ಸಿದ್ದರಾಮಯ್ಯ ಅಣ್ಣನವರೆ ಹುಷಾರಾಗಿರಿ ಡಿಕೆ ಶಿವಕುಮಾರ್ ಅವರು ಸಿಡಿ ತಯಾರಿಸುವುದರಲ್ಲಿ ನಿಸ್ಸೀಮರು. ಇಂತವರನ್ನು ಪಕ್ಕದಲ್ಲಿಟ್ಟುಕೊಂಡು ಓಡಾಡಬೇಡಿ ಜಾರಕಿಹೋಳಿ ಸಿಡಿ ಅವರ ಮನೆಗೆ ಕಳುಹಿಸಿದ ಡಿಕೆ ಶಿವಕುಮಾರ್ ನಿಮಗೆ ಯಾವತ್ತೂ ಒಳ್ಳೆಯದನ್ನು ಮಾಡುವುದಿಲ್ಲ. ನಿಮ್ಮ ಖುರ್ಚಿ ಮೇಲೆ ಡಿಕೆ ಕಣ್ಣಿದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಲು ಸಿದ್ದರಿದ್ದಾರೆ ಎಂದು ಎಚ್ಚರಿಸಿದರು.
ತಮ್ಮ ರಾಜಕೀಯ ಎದುರಾಳಿಗಳನ್ನು ಮುಗಿಸಲು ಡಿಕೆಶಿ ಪೆನ್‌ಡ್ರೈವ್ ಯೂನಿವರ್ಸಿಟಿ ತೆಗೆದಿದ್ದಾರೆ. ಯಾರನ್ನು ಹೇಗೆ ಬಗ್ಗು ಬಡಿಯಬೇಕು ಎಂಬ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿದೆ. ಕೆಲವರಿಗೆ ಬೆದರಿಕೆ ಅಸ್ತ್ರ ಹೂಡಿದರೇ, ಮತ್ತೆ ಕೆಲವರಿಗೆ ಸಿಡಿ ಅಸ್ತ್ರ ಹೂಡುತ್ತಾರೆ. ಅಗತ್ಯಬಿದ್ದರೇ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಡಿ ಅಸ್ತ್ರ ಬಳಸಲಿದ್ದಾರೆ ಎಂದು ಕಿಡಿಕಾರಿದರು.
ಪೆನ್‌ಡ್ರೈವ್ ವಿಚಾರದ ಬಗ್ಗೆ ಮೊದಲೇ ತಿಳಿದಿದ್ದ ಡಿಕೆಶಿ ಮತ್ಯಾಕೆ ವಿಚಾರ ಪ್ರಸ್ತಾಪಿಸಿಲ್ಲ. ಅವರಿಗೆ ಶಿಕ್ಷೆ ಕೊಡಿಸುವುದಕ್ಕಿಂತ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದೇ ಮುಖ್ಯವಾಗಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…