ಬೆಂಗಳೂರು : 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ.
ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವದಳದ ಸದಸ್ಯರು ಈ ಬದಲಾವಣೆಗೆ ಕಾರಣರಾಗಿದ್ದಾರೆ.
ಸಮುದಾಯದ ನಿಲುವನ್ನು ಸ್ಪಷ್ಟಪಡಿಸಿದ ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ನಮ್ಮ ಕೋಪ ಕೇವಲ ಮೀಸಲಾತಿ ವಿಷಯದ ಮೇಲಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಎರಡು ವರ್ಷ ಕಳೆದರೂ ಬಿಜೆಪಿ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ನಾವು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ನಮ್ಮೊಂದಿಗೆ ಮಾತನಾಡಲು ಸರ್ಕಾರಕ್ಕೆ ಸಮಯವಿಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದು ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪಂಚಮಸಾಲಿಗಳು ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಈ ಬಾರಿ ಲಿಂಗಾಯತ ಸಮುದಾಯ ಬೆಂಬಲ ನೀಡುವಲ್ಲಿ ದೊಡ್ಡ ತೊಡಕುಗಳಿವೆ ಎಂದು ಲಿಂಗಾಯತ ಚಳುವಳಿಗಳೊಂದಿಗೆ ಗುರುತಿಸಿಕೊಂಡಿರುವ ಮಾಜಿ ಅಕಾರಿ ಎಸ್.ಎಂ.ಜಮದಾರ್ ಹೇಳಿದ್ದಾರೆ.
ಲಿಂಗಾಯತರು ಸಾಮಾನ್ಯವಾಗಿ ಸಮುದಾಯದ ಪರವಾಗಿ ನಿಲ್ಲುವವರನ್ನು ಬೆಂಬಲಿಸುತ್ತಾರೆ. ಆದರೆ ಈ ಬಾರಿ ಯಡಿಯೂರಪ್ಪ ಅವರು ಸಿಎಂ ಆಗಿ ನಿರ್ಗಮಿಸಿದ ನಂತರ, ವಿಶೇಷವಾಗಿ ಅವರು ಕಣ್ಣೀರು ಸುರಿಸಿದ ನಂತರ ಅದು ತಣ್ಣಗಾದಂತಿದೆ.
ನಮ್ಮನ್ನು ವಿರೋಸುವವರು ಮೂಲತಃ ಕಾಂಗ್ರೆಸ್ ಪರ ಶಕ್ತಿಗಳಾಗಿದ್ದು, ಬಿಜೆಪಿಯಿಂದ ದೂರ ಸರಿಯುತ್ತಿಲ್ಲ. ಲಿಂಗಾಯತರು ಇತರರನ್ನು ನಂಬುವುದಿಲ್ಲವಾದ್ದರಿಂದ ಅವರು ನಮ್ಮನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ ಎಂದು ಬಿಜೆಪಿ ಪ್ರಮುಖರೊಬ್ಬರು ಹೇಳಿದ್ದಾರೆ.
ಲಿಂಗಾಯತ ಸಮುದಾಯ ಬೆಂಬಲ ಕಡಿಮೆಯಾಗುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಪಂಚಮಸಾಲಿ ಉಪಪಂಗಡ ಸೇರಿದಂತೆ ಹಲವು ಸ್ವಯಂಸೇವಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮತ್ತಷ್ಟು ಕೆಲಸಕ್ಕಾಗಿ ನನ್ನನ್ನು ಬೆಂಬಲಿಸಿ: ರಾಮದಾಸ್
Next Article ಮಾ.24ಕ್ಕೆ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ