ಬೆಂಗಳೂರು: ಕೇಂದ್ರ ಸರ್ಕಾರದ ನಿಯಮಾನುಸಾರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಇರುವುದು ಬಡವರಿಗಾಗಿ, ಹಾಗಾಗಿ ಯಾರೂ ಕೂಡ ಗಾಬರಿ ಆಗುವ ಅವಶ್ಯಕತೆಯಿಲ್ಲ. ಸರ್ಕಾರಿ ನೌಕರರು ಹಾಗೂ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಲಿದೆ. 7 ಎಕರೆ ಜಮೀನು ಇದ್ದವರೆಲ್ಲಾ ಅನರ್ಹರೇ ಆಗ್ತಾರೆ. ಹಾಗಾಗಿ ಪ್ರತೀ ಕ್ಷೇತ್ರದ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಮನೆ ಮನೆಗೆ ಹೋಗಿ ದಾಖಲೆ ಸರಿಪಡಿಸಲು ಹೇಳಿದ್ದೇವೆ. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತೇವೆ. ಅರ್ಹರು ಯಾರೂ ಕೂಡ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.





