ಬೆಂಗಳೂರು: ಮೀಸಲಾತಿ ಬಗ್ಗೆ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದೆ.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಎಂಎಲ್‌ಸಿ ಎನ್.ರವಿಕುಮಾರ್, ರಾಜ್ ಕುಮಾರ್ ಪಾಟೀಲ್ ಸೇರಿದಂತೆ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ಅಮೇರಿಕಾ ಪ್ರವಾಸ ಕೈಗೊಂಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್ ಪಕ್ಷ ಚಿಂತಿಸಲಿದೆ ಎಂದು ಹೇಳಿದ್ದರು.
ಈ ಬೆನ್ನಲ್ಲೇ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿಂದು ರಾಹುಲ್ ಗಾಂಧಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದೆ.