ರಾಜ್ಯ

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.

ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ಧುರ್ಯೋದನ ಐಹೊಳೆ, ಬಸವರಾಜ್ ಮತ್ತಿಮಡು, ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಮತ್ತಿತರ ನಿಯೋಗವು ಲೋಕ ಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಮನವಿ ಮಾಡಿಕೊಂಡಿತು.

ಸುಮಾರು 20 ನಿಮಿಷಗಳ ಕಾಲ ನಡೆದ ಮಾತುಕತೆ ಸಂದರ್ಭದಲ್ಲಿ ಒಳಮೀಸಲಾತಿ ಸಂಬಂಧ ಸರ್ಕಾರ ಕಳುಹಿಸಿರುವ ಮಸೂದೆ ಕುರಿತು ಯಾವುದಾದರೊಂದು ನಿರ್ಧಾರ ತೆಗೆದುಕೊಳ್ಳಬೇಕು. ಈ ಮಸೂದೆ ಕಾರ್ಯರೂಪಕ್ಕೆ ಬಂದರೆ ಸಮುದಾಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ತೀರ್ಪು ಬಂದು 18 ತಿಂಗಳಾಗಿದೆ. ಪಕ್ಕದ ತೆಲಂಗಾಣ, ಆಂಧ್ರಪ್ರದೇಶ, ದೂರದ ಹರ್ಯಾಣ ಸರ್ಕಾರಗಳು ಆರೇ ತಿಂಗಳಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಿ ನ್ಯಾಯ ಕೊಟ್ಟವು. ಆದರೆ ಕರ್ನಾಟಕದಲ್ಲಿ ಇನ್ನೂ ಒಳ ಮೀಸಲಾತಿ ಜಾರಿಯಾಗಿಲ್ಲ ಎಂದು ರಾಜ್ಯಪಾಲರಲ್ಲಿ ಬೇಸರ ಹೊರಹಾಕಿದರು.

ನ್ಯಾಯಮೂರ್ತಿ ನಾಗ ಮೋಹನ್‍ದಾಸ್ ಆಯೋಗ ರಚನೆ ಮಾದಿಗ ಸಮಾಜದ ಬೇಡಿಕೆ ಆಗಿರಲಿಲ್ಲ. ಈ ಹಿಂದೆ ತಯಾರಿಸಿದ ಸದಾಶಿವ ಆಯೋಗದ ವರದಿ ಮತ್ತು ಮಾಧುಸ್ವಾಮಿ ಸಮಿತಿ ವರದಿಯ ದತ್ತಾಂಶಗಳು ಸರ್ಕಾರದ ಬಳಿ ಇದ್ದವು. ಆದರೂ ಸರ್ಕಾರ ನಾಗಮೋಹನ ದಾಸ್ ಆಯೋಗ ರಚಿಸಿ ವರದಿ ಪಡೆಯಲು ನಿಶ್ಚಯಿಸಿತು. ಆರು ತಿಂಗಳು ಶ್ರಮವಹಿಸಿ, 110 ಕೋಟಿ ತೆರಿಗೆ ಹಣ ವ್ಯಯಿಸಿ ಆಯೋಗದಿಂದ ಶಿಫಾರಸುಗಳನ್ನು ಪಡೆಯಲಾಯಿತು ಎಂದು ನಿಯೋಗ ವಿವರಿಸಿತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

10 mins ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

21 mins ago

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…

42 mins ago

ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ : ಯದುವೀರ್ ಆರೋಪ

ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…

52 mins ago

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

2 hours ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

2 hours ago