ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಎಂದು ಕಿಡಿಕಾರಿದೆ.
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದೆ.
ವಿನಯ್ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್ ಗೌಡ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದೆ.