ರಾಜ್ಯ

ವಿನಯ್‌ ಸೋಮಯ್ಯರವರ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಬಿಜೆಪಿ ಆಗ್ರಹ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಸಾವಿಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ ಹಾಗೂ ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದರು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದೆ ಕೊಲೆಗಡುಕ ಕಾಂಗ್ರೆಸ್‌ ಸರ್ಕಾರ ಎಂದು ಕಿಡಿಕಾರಿದೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ, ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ, ಶಾಸಕ ಎ.ಎಸ್‌.ಪೊನ್ನಣ್ಣ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರ ಮೇಲೆ ಇಲ್ಲಸಲ್ಲದ ಕೇಸು ಹಾಕಿ, ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದೆ.

ವಿನಯ್‌ ಸೋಮಯ್ಯ ಅವರ ಕೊಲೆಗೆ ಕಾರಣರಾದ ಎ.ಎಸ್.ಪೊನ್ನಣ್ಣ, ತೆನ್ನಿರಾ ಮೈನಾ, ಮಂಥರ್‌ ಗೌಡ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದು ತಿಳಿಸಿದೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago