ಬೆಂಗಳೂರು: ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ
ಚುನಾವಣೆಗೂ ಮೊದಲು ಅವೈಜ್ಞಾನಿಕವಾಗಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಬಲದಿಂದ ಅಧಿಕಾರಕ್ಕೆ ಬಂದು, ಬಳಿಕ ಕಂಡಿಷನ್ ಅಪ್ಲೈ ಎಂಬ ನಿಯಮದಡಿ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಈಗ ಆ ಗ್ಯಾರಂಟಿಗಳನ್ನು ಸಹ ಹಣಕಾಸಿನ ಕೊರತೆಯಿಂದ ನಿಂತಿದೆ ಎಂದು ಸ್ವತಃ ಸಚಿವರೇ ಹೇಳಿದ್ದಾರೆ ಎಂದು ಲೇವಡಿ ಮಾಡಿದೆ.
ಗ್ಯಾರಂಟಿ ಯೋಜನೆಗಳನ್ನು ನೀಡಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದರು. ಆದರೆ ಈಗ ರಾಜ್ಯ ಸರ್ಕಾರದ ಖಜಾನೆ ಸಹ ಖಾಲಿಯಾಗಿ ನಾಲ್ಕೈದು ತಿಂಗಳಿನಿಂದ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಯಾಗಿಲ್ಲ. ಅದಕ್ಕೆಲ್ಲಾ ಕಾಂಗ್ರೆಸ್ ಪಕ್ಷದ ದುರಾಡಳಿತವೇ ಕಾರಣವಾಗಿದ್ದು, ಸರ್ಕಾರದ ಬೊಕ್ಕಸ ಬರಿದಾಗಿದೆ ಆರೋಪಿಸಿದೆ.
ರಾಜ್ಯದಲ್ಲಿ ಅಭಿವೃದ್ಧಿ ಬಿಡಿ, ಸರ್ಕಾರ ನಡೆಸಲು, ಇಲಾಖೆಯ ಸಿಬ್ಬಂದಿಗಳ ವೇತನಗಳನ್ನು ಪಾವತಿಸಲು ಸಿಎಂ ಸಿದ್ದರಾಮಯ್ಯದ ಸರ್ಕಾರದ ಬಳಿ ದುಡ್ಡಿಲ್ಲ. ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದೆ.





