ರಾಜ್ಯ

ಕೇಂದ್ರಕ್ಕೆ ಮತ್ತೊಂದು ಬೇಡಿಕೆಯಿಟ್ಟ ಬಿಜೆಪಿ: 500 ರೂ ನೋಟುಗಳ ಮೇಲೆ ಅಂಬೇಡ್ಕರ್‌ ಚಿತ್ರ ಮುದ್ರಿಸುವಂತೆ ಆಗ್ರಹ

ಹುಬ್ಬಳ್ಳಿ: 500 ರೂ ಮುಖಬೆಲೆಯ ನೋಟುಗಳ ಮೇಲೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯ ಮಾಡಿದೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, 500 ರೂ ಮುಖಬೆಲೆಯ ನೋಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರ ಹಾಕಬೇಕು ಎನ್ನುವ ಆಗ್ರಹ ಮೊದಲಿನಿಂದಲೂ ಇದೆ. ಇದೇ ಏಪ್ರಿಲ್‌.14ರ ಅಂಬೇಡ್ಕರ್‌ ಅವರ ಜನ್ಮದಿನದ ಒಳಗೆ ಈ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಮನವಿ ಮಾಡಿದರು.

ಏಪ್ರಿಲ್.14ರಂದು ಅಂಬೇಡ್ಕರ್‌ ಅವರ ಜನ್ಮದಿನಾಚರಣೆಯ ಮೊದಲು ಈ ನಿರ್ಧಾರ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೆ ತರುವಂತೆ ಮನವಿ ಮಾಡಿದರು.

ನೋಟುಗಳ ಮೇಲೆ ಅಂಬೇಡ್ಕರ್‌ ಅವರ ಚಿತ್ರವನ್ನು ನೋಡುವುದು ದಲಿತ ಸಮುದಾಯಗಳಿಗಷ್ಟೇ ಅಲ್ಲ. ಇಡೀ ದೇಶಕ್ಕೆ ಅಂಬೇಡ್ಕರ್‌ ನೀಡಿದ ಕೊಡುಗೆಗಳನ್ನು ಸ್ಮರಿಸುವ ಇತರರ ಬಹುದಿನಗಳ ಕನಸಾಗಿದೆ. ಇದಲ್ಲದೇ ಅಂಬೇಡ್ಕರ್‌ ಅವರನ್ನು ಭಾರತದಲ್ಲಿ ಮಾತ್ರವಲ್ಲದೇ 150 ದೇಶಗಳ ಜನರೂ ಕೂಡ ಗೌರವಿಸುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಸಂಸತ್‌ನಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಮಾತನಾಡಿದ್ದು ಹಿಂದಿಯಲ್ಲಿ. ಈ ಭಾಷೆ ಅರ್ಥವಾಗದವರು ಬೀದಿಗೆ ಇಳಿದಿದ್ದಾರೆ. ಮೊದನಿನಂತಹ ಸಂಘಟನೆಗಳು ಈಗ ಇಲ್ಲ. ಈಗಿರುವುದೆಲ್ಲಾ ಹೊಟ್ಟೆಪಾಡಿನ ಸಂಘಟನೆಗಳು. ಅವರೆಲ್ಲ ಅಂಬೇಡ್ಕರ್‌ ಅವರ ಗುರುತಿನ ಚೀಟಿಯಷ್ಟೇ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

23 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

39 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

55 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago