Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕಾಂಗ್ರೆಸ್‌ ಶಾಸಕರ ವಿರುದ್ಧ ದೂರು ದಾಖಲಿಸುವಂತೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಗುರಿಯಾಗುತ್ತಿರುವ ಕಾಂಗ್ರೆಸ್‌ ನಾಯಕ ಐವಾನ್‌ ಡಿಸೋಜ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕಾಂಗ್ರೆಸ್‌ ಶಾಸಕ ಐವಾನ್‌ ಡಿಸೋಜ ಅವರು, ರಾಜ್ಯಪಾಲರನ್ನು ಬಾಂಗ್ಲಾದೇಶ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂದಿದ್ದರು.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರು, ಐವಾನ್‌ ಡಿಸೋಜ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ.ರವಿ ಅವರು, ಕಾಂಗ್ರೆಸ್‌ನ ಹತಾಶ ಮನಸ್ಥಿತಿಗಳು ಹೇಗೆಲ್ಲಾ ಕಾರ್ಯಾಚರಿಸುತ್ತಿವೆ ಎಂಬುದನ್ನು ಡಿಸೋಜ ಸವಿವರವಾಗಿ ಬಿಚ್ಚಿಟ್ಟಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು ಎಂದು ಪ್ರಶ್ನಿಸಿದರು.

ಇನ್ನು ಕಾಂಗ್ರೆಸ್‌ ಶಾಸಕರ ಈ ಹೇಳಿಕೆಗೆ ರಾಹುಲ್‌ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ. ಕೂಡಲೇ ಐವಾನ ಡಿಸೋಜ ಅವರ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

Tags:
error: Content is protected !!