ಬೆಂಗಳೂರು: ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜ ಅವರು, ರಾಜ್ಯಪಾಲರನ್ನು ಬಾಂಗ್ಲಾದೇಶ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂದಿದ್ದರು.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರು, ಐವಾನ್ ಡಿಸೋಜ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿ.ಟಿ.ರವಿ ಅವರು, ಕಾಂಗ್ರೆಸ್‌ನ ಹತಾಶ ಮನಸ್ಥಿತಿಗಳು ಹೇಗೆಲ್ಲಾ ಕಾರ್ಯಾಚರಿಸುತ್ತಿವೆ ಎಂಬುದನ್ನು ಡಿಸೋಜ ಸವಿವರವಾಗಿ ಬಿಚ್ಚಿಟ್ಟಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು ಎಂದು ಪ್ರಶ್ನಿಸಿದರು.
ಇನ್ನು ಕಾಂಗ್ರೆಸ್ ಶಾಸಕರ ಈ ಹೇಳಿಕೆಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ. ಕೂಡಲೇ ಐವಾನ ಡಿಸೋಜ ಅವರ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…