ರಾಜ್ಯ

ದೇಶ ಭಕ್ತಿಯನ್ನು ನಮಗೆ ಬಿಜೆಪಿಯವರು ಹೇಳಿ ಕೊಡಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನ ಹೊರವಲಯದ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ವಿದಾನಸಭೆ ಆವರಣದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಎಫ್​ಎಸ್​ಎಲ್ ವರದಿ ಬಹಿರಂಗ ಪಡಿಸುವಂತೆ ವಿಪಕ್ಷ ನಾಯಕರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿ, ವರದಿ ಬಂದ ಕೂಡಲೇ ಬಹಿರಂಗ ಮಾಡುತ್ತೇವೆ. ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇದ್ದರೆ ಅಂತಹವರ ಕಠಿಣವಾದ ಕ್ರಮ ಕೈಗೊಳ್ಳುತ್ತೇವೆ.

ದೇಶ ಭಕ್ತಿಯನ್ನು ನಮಗೆ ಬಿಜೆಪಿಯವರು ಹೇಳಿ ಕೊಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದೇಶ ಭಕ್ತಿ ಹೇಳಿ ಕೊಡಬೇಕಾ? ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಯಾರು? ಅವರು ರಾಜಕೀಯಕ್ಕೋಸ್ಕರ ಏನೋ ಹೇಳ್ತಾರೆ, ಅದು ಬೇರೆ ವಿಚಾರ. ಅವರು ಏನಾದರೂ ಆ ತರ ಕೂಗಿದ್ರೆ ಕಠಿಣವಾದ ಕ್ರಮ ತೆಗೆದುಕೊಳ್ತೇವೆ ಎಂದು ಸಿದ್ದರಾಮಯ್ಯ ಗುಡುಗಿದರು.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಷ್ಟೊಂದು ಗೊಂದಲ ಇಲ್ಲ ಹಾಸನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಲೋಕಸಭಾ ಅಭ್ಯರ್ಥಿಗಳ ಪಟ್ಟಿ ತಕ್ಷಣ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ಮಾಡಲು ಸಮಸ್ಯೆ ಏನು ಇಲ್ಲ ಎಂದು ಅವರು ಹೇಳಿದರು.

andolana

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago