ರಾಜ್ಯ

ಮುಡಾ ಕೇಸ್‌ನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹರಗಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಗಳ ಜೊತೆ ಮಾತನಾಡಿರುವ ಅವರು, ಮುಡಾ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಇರುವುದು ಕಾಣುತ್ತಿದೆ. ಕೇವಲ 24 ಗಂಟೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡಿರುವುದನ್ನು ನೋಡಿದರೇ ಅದರ ಒಳಮರ್ಮ ಅರ್ಥವಾಗುತ್ತದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ರಾಜ್ಯಪಾಲರು ಕೈಗೊಂಬೆ ಆಗಿರುವುದು ಕಾಣುತ್ತದೆ ಎಂದು ದೂರಿದರು.

ರಾಜ್ಯದಲ್ಲಿ ಬಿಜೆಪಿ ವಿರುದ್ಧ ಬಿಜೆಪಿಯೇ ಹೋರಾಟ ಮಾಡುತ್ತಿದೆ. ಇಲ್ಲಿ ಅಶೋಕ್‌ ಹಾಗೂ ವಿಜಯೇಂದ್ರ ಅವರ ನಾಯಕತ್ವವನ್ನು ಯಾರು ಒಪ್ಪುತ್ತಿಲ್ಲ. ಬಿಜೆಪಿ ಅವರು ಬೇರೆ ಬೇರೆ ಪಾದಯಾತ್ರೆ ಮಾಡುವ ಬದಲು ಹೆಹಲಿ ಚಲೋ ಮಾಡಿದರೆ ಒಳಿತಾಗುತ್ತದೆ ಎಂದು ವ್ಯಂಗ್ಯವಾಡಿದರು.

ಮೈಸೂರು ಚಲೋ ಯಾತ್ರೆಗೆ ಬಿಜೆಪಿಯ ಹಿರಿಯ ನಾಯಕರು ಯಾರೂ ಸಹಾ ಭಾಗವಹಿಸಿಲ್ಲ. ಇದರಿಂದಲೇ ನಮಗೆ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎಂಬುದನ್ನು ಸಾಭೀತುಪಡಿಸುತ್ತದೆ. ಮೈಸೂರು ಚಲೋ ಎಂಬುದು ಕೇವಲ ಬಿವೈ ವಿಜಯೇಂದ್ರ ಹಾಗೂ ನಿಖಿಲ್‌ ಕುಮಾರಸ್ವಾಮಿ ಅವರನ್ನು ಲಾಂಚ್‌ ಮಾಡುವುದಷ್ಟೆ ಇದರ ಉದ್ದೇವಾಗಿತ್ತು ಎಂದು ಲೇವಡಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

1 hour ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

2 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

2 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

6 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

11 hours ago