Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಸುಳ್ಳು ಪ್ರಚಾರದಲ್ಲಿ ತೊಡಗಿರುವ ಬಿಜೆಪಿ : ಸಿಎಂ ಟೀಕೆ

ತುಮಕೂರು : ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? ಜನರನ್ನು ತಪ್ಪುದಾರಿಗೆ ಎಳೆಯುವಂತಹ ಸುಳ್ಳು ಪ್ರಚಾರದಲ್ಲಿಯೇ ಬಿಜೆಪಿ ತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೂಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆ ಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

ಬಿಜೆಪಿಯವರು ರಾಜ್ಯದಲ್ಲಿ 9 ವರ್ಷಗಳು ಅಧಿಕಾರಿದಲ್ಲಿದ್ದರೂ ಇಂತಹ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದರೆ, ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರದಾನಿ ಮೋದಿಯವರು ಟೀಕಿಸಿದರು. ರಾಜ್ಯದ ಬಿಜೆಪಿಯವರ ಸಾಧನೆ ಏನು ಎಂದು ಪ್ರಶ್ನಿಸಿದರು.

ತೆರಿಗೆ ಪಾಲಿನ ಬಗ್ಗೆ ಬಿಜೆಪಿ ಜೆಡಿಎಸ್ ಸಂಸದರು ಕೇಂದ್ರವನ್ನು ಪ್ರಶ್ನಿಸುತ್ತಿಲ್ಲ
ಕರ್ನಾಟಕದಿಂದ ಪ್ರತಿ ವರ್ಷ 4.50 ಲಕ್ಷ ಕೋಟಿ ತೆರಿಗೆ ಕೇಂದ್ರ ಸರ್ಕಾರಕ್ಕೆ ತಲುಪುತ್ತಿದ್ದು, ಅದರಲ್ಲಿ ಕೇವಲ 65 ಸಾವಿರ ಕೋಟಿ ರೂ. ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಇದನ್ನು ಯಾವುದೇ ಜೆಡಿಎಸ್ ಹಾಗೂ ಬಿಜೆಪಿ ಸಂಸದರು , ಕೇಂದ್ರವನ್ನು ಪ್ರಶ್ನಿಸುತ್ತಿಲ್ಲ. ಕಳೆದ ವಿಧಾನಸಭೆ ಚುನಾಣೆಯಲ್ಲಿ 136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದ ಪರಿಣಾಮ, ಜೆಡಿಎಸ್ ನವರು ಬಿಜೆಪಿಯೊಂದಿಗೆ ಮೈತ್ರಿ ಹೊಂದಿ ಲೋಕಸಭಾ ಚುನಾವಣೆಯನ್ನು ಎದುರಿಸುವ ದುಸ್ಥಿತಿ ಬಂತು. ಜಿಡಿಎಸ್ ನವರ ಶಕ್ತಿ ಇಲ್ಲಿ ಕುಂದುತ್ತಿದೆ. 2004 ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ, ಜೆಡಿಎಸ್ ಪಕ್ಷ 59 ಸ್ಥಾನಗಳನ್ನು ಗೆದ್ದಿತ್ತು, ಆದ್ರೆ ಹಿಂದಿನ ಚುನಾವಣೆಯಲ್ಲಿ ಅವರು ಕೇವಲ 18 ಸ್ಥಾನಗಳನ್ನು ಗೆದ್ದರು. ಪಾವಗಡ ಕ್ಷೇತ್ರದಲ್ಲಿ ಜಿಡಿಎಸ್ ಪಕ್ಷ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ನವರ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೊಳಿಸಿದ್ದ ಶಕ್ತಿ ಯೋಜನೆಯಲ್ಲಿ , ಇದುವರೆಗೆ ಸುಮಾರು 500 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆದಿದ್ದಾರೆ. ಗೃಹ ಜ್ಯೋತಿ ಯೋಜನೆಯಡಿ 1.64 ಕೋಟಿ ಕುಟುಂಬಗಳು ಲಾಭ ಪಡೆಯುತ್ತಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ನೀಡಿ, ರಾಜ್ಯ ಹಸಿವು ಮುಕ್ತವಾಗಬೇಕೆನ್ನುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.

ಪ್ರತಿಪಕ್ಷಗಳು ಸರ್ಕಾರದ ಬಗ್ಗೆ ಅಪಪ್ರಚಾರ, ತಪ್ಪು ಮಾಹಿತಿಯನ್ನು ಜನರಿಗೆ ನೀಡಬಾರದು
ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸರ್ಕಾರ ನಿಲ್ಲಿಸುತ್ತದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದರು. ಅಪಪ್ರಚಾರ, ತಪ್ಪು ಮಾಹಿತಿಯನ್ನು ಜನರಿಗೆ ನೀಡಬಾರದು ಎಂದು ಈಗಾಗಲೇ ಬಹಿರಂಗ ಚರ್ಚೆಗೆ ಬರಲು ಆಹ್ವಾನ ನೀಡಿದ್ದೇನೆ ಎಂದರು.

ಬಿಜೆಪಿಯವರು ಸುಳ್ಳಿನ ಸರದಾರರು
ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಂದು ಕರ್ನಾಟಕಕ್ಕೆ 14 ನೇ ಹಣಕಾಸು ಆಯೋಗದಲ್ಲಿ 4.7% ಕೊಡುತ್ತಿದ್ದ ಅನುದಾನದಲ್ಲಿ 15 ನೇ ಹಣಕಾಸಿನ ಆಯೋಗದಲ್ಲಿ 3.6% ಗೆ ಇಳಿಸಿದರು. 1.15% ಅನುದಾನ ಕಡಿಮೆಯಾಗಿದೆ. 68000 ಕೋಟಿ ರೂ.ಗಳ ನಷ್ಟವಾಗಿದೆ. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರತಿಪಕ್ಷಗಳಿಗೆ ಗೌರವ ಇದ್ದಿದ್ದರೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿರಲಿಲ್ಲ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನವಿಲ್ಲ ಎನ್ನುತ್ತಾರೆ. 2529 ಕೋಟಿ ಕುಡಿಯುವ ನೀರಿನ ಯೋಜನೆ, 716 ಕೋಟಿ ರೂ.ಗಳ ಅಭಿವೃದ್ಧಿಗೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿದೆ. ಈ ಅಭಿವೃದ್ಧಿಯಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳಿನ ಸರದಾರರು. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳೇ ಅವರ ಮನೆ ದೇವರು. ಅವರ ಮಾತುಗಳನ್ನು ನಂಬಬೇಡಿ ಎಂದರು.

ಕಾಂಗ್ರೆಸ್ ಪಕ್ಷ ಮಾತ್ರ ಈ ರಾಜ್ಯದ ದಲಿತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು ಹಾಗೂ ಕಾರ್ಮಿಕರ ಪರವಾಗಿರುವ ಸರ್ಕಾರ ಎಂದರು.

ಸರ್ಕಾರದ ಯೋಜನೆಗಳನ್ನು ಒಂದು ಪಕ್ಷ, ಒಂದು ಜಾತಿ, ಧರ್ಮಕ್ಕೆ ನೀಡಿಲ್ಲ
ನಮ್ಮ ಸರ್ಕಾರ ಒಂದು ಧರ್ಮದ ಪರವಾಗಿ ಮಾತನಾಡಿಲ್ಲ. ಅಕ್ಕಿ, ಕರೆಂಟ್, ಶಕ್ತಿ, ಯೋಜನೆಯನ್ನು ಬಿಜೆಪಿಯ ಬಡವರಿಗೂ ನೀಡಲಾಗಿದೆ. ಒಂದು ಪಕ್ಷಕ್ಕೆ, ಒಂದು ಜಾತಿ, ಧರ್ಮಕ್ಕೆ ನೀಡಿಲ್ಲ. ರಾಜ್ಯ ಸರ್ವತೋಮುಖ ಅಭಿವೃದ್ಧಿಯಾಗಬೇಕು. ಹಿಂದುಳಿದ ತಾಲ್ಲೂಕುಗಳು ಮುಂದುವರೆಯಲು ಈ ಎಲ್ಲಾ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಕರ್ನಾಟಕದ 240 ತಾಲ್ಲೂಕು, 224 ವಿಧಾನಸಭಾ ಕ್ಷೇತ್ರಗಳಿಗೆ ಎಲ್ಲಾ ಕಾರ್ಯಕ್ರಮಗಳನ್ನು ಒದಗಿಸಲಾಗುತ್ತಿದೆ ಎಂದರು.

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಪೂರ್ಣ
5300 ಕೋಟಿ ರೂ.ಗಳ ಒದಗಿಸುವುದಾಗಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರೂ ಇಲ್ಲಿಯವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ಎತ್ತಿನಹೊಳೆ ಯೋಜನೆಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿಗಳು, 23 ಕೆರೆಗಳಿಗೆ ಸಣ್ಣ ನೀರಾವರಿ ಇಲಾಖೆ ಮೂಲಕ ನೀರು ತುಂಬಿಸುವ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನ ಮಾಡುವುದಾಗಿ ಭರವಸೆ ನೀಡಿದರು.

2028 ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ, ಜೆಡಿಎಸ್ ಅನ್ನು ಸೋಲಿಸಿ ಪುನಃ ಅಧಿಕಾರಕ್ಕೆ ಬಂದೇ ಬರುತ್ತೇವೆ
2028 ರಲ್ಲಿಯೂ ನಾವೇ ಅಧಿಕಾರಕ್ಕೆ ಬರುವುದಾಗಿ ಹೇಳಿದ ಅವರು, ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಚರ್ಚೆಗೆ ಕರೆದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆ ಮಾಡುವಂತೆ ಹೇಳುತ್ತಾರೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿದೆ. ಚುನಾವಣೆಗೆ ನಾವು ಹೆದರುವುದಿಲ್ಲ. ವಿಜಯೇಂದ್ರ ಕುರ್ಚಿ ಅಲ್ಲಾಡುತ್ತಿದ್ದು, 2028 ರ ವರೆಗೆ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ತಿಳಿದಿಲ್ಲ ಎಂದರು. ನಾಳೆ ಚುನಾವಣೆಯಾದರೂ ನಾವು ಗೆದ್ದೆ ಗೆಲ್ಲುತ್ತೇವೆ. ಆದರೆ ಜನ ನಮಗೆ 2028 ರ ಮೇ ವರೆಗೆ ಅಧಿಕಾರ ನೀಡಿದ್ದಾರೆ. ಅದರಂತೆ ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುತ್ತೇವೆ. 2028 ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ, ಜೆಡಿಎಸ್ ಅನ್ನು ಸೋಲಿಸಿ ಪುನಃ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.

2050 ಮೆಗಾ ವ್ಯಾಟ್ ಸೌರಶಕ್ತಿ ಉತ್ಪಾದಿಸುವ ಘಟಕವನ್ನು ಲೋಕಾರ್ಪಣೆ ಮಾಡಲಾಗಿದೆ.
ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಪಾವಗಡ ತಾಲೂಕು ಮುಂದುವರೆಯುವ ಬಗ್ಗೆ ಸಂತೋಷವಿದೆ ಎಂದರು.

Tags:
error: Content is protected !!