ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್ ನಾಯ್ಡು ವಿರುದ್ಧ ಹೌಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೂಡಘಟ್ಟ ಅವರು ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಖಾಸಗಿ ದೂರು ನೀಡಿದ್ದರು. ಬಿಜೆಪಿ ಅಭಿಯಾನ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್‌ನ್ನು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿತ್ತು. ಆದ್ದರಿಂದ ಪೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್ ಮತ್ತು ಬಿಆರ್ ನಾಯ್ಡು ವಿರುದ್ಧ 153(a), 504, 506, 464 ಸೆಕ್ಷನ್ ಅಡಿ ಎಫ್‌ಐಆರ್ ದಾಖಲಿಸಲಾಗಿದೆ.
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…